ಭಾಗ್ಯದ ಲಕ್ಷ್ಮಿ...

- ಪುರಂದರ ದಾಸ
ಭಾಗ್ಯದ ಲಕ್ಷ್ಮಿ ಬಾರಮ್ಮ ನಮ್ಮಮ್ಮ ನೀ
ಸೌಭಾಗ್ಯದ ಲಕ್ಷ್ಮಿ ಬಾರಮ್ಮ ||

ಹೆಜ್ಜೆಯ ಮೇಲೆ ಹೆಜ್ಜೆಯ ನಿಕ್ಕುತ
ಗೆಜ್ಜೆಯ ಕಾಲಿನ ನಾದವ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ

ಕನಕ ವೃಷ್ಟಿಯ ಕರೆಯುತ ಬಾರೆ
ಮನಕೆ ಮಾನವ ಸಿದ್ಧಿಯ ತೊರೆ
ದಿನಕರ ಕೋಟಿ ತೇಜದಿ ಹೊಳೆಯುವ
ಜನಕ ರಾಯನ ಕುಮಾರಿ ಬೇಗ

ಅತ್ತಿತ್ತಗಲದೆ ಭಕ್ತರ ಮನೆಯೊಳು
ನಿತ್ಯ ಮಹೋತ್ಸವ ನಿತ್ಯ ಸುಮಂಗಳ
ಸತ್ಯವ ತೋರುವ ಸಾಧು ಸಜ್ಜನರ
ಚಿತ್ತದಿ ಹೊಳೆಯುವ ಪುತ್ತಳಿ ಬೊಂಬೆ

ಶಂಕೆ ಇಲ್ಲದೆ ಭಾಗ್ಯವ ಕೊಟ್ಟು
ಕಂಕಣ ಕೈಯ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜ ಲೋಚನೆ
ವೆಂಕಟರಮಣನ ಬಿಂಕದ ರಾಣಿ

ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅಳಗಿರಿ ರಂಗನ
ಚೊಕ್ಕ ಪುರಂದರ ವಿಠಲನ ರಾಣಿ

Video link:
http://www.youtube.com/watch?v=_tdYY6lUw9g
ಮತ್ತೊಂದು ಶೈಲಿ
http://www.youtube.com/watch?v=jry9uHqzyag
English lyrics:
http://madhurabhavageethegalu.blogspot.com/2012/07/bhagyada-lakshmi.html

No comments:

Post a Comment

Note: Only a member of this blog may post a comment.