ಸ್ತ್ರೀ ಎಂದರೆ ಅಷ್ಟೆ ಸಾಕೆ...

- ಜಿ. ಎಸ್. ಶಿವರುದ್ರಪ್ಪ
ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ, ನಿನಗೆ ಬೇರೆ ಹೆಸರು ಬೇಕೆ ?
ಸ್ತ್ರೀ ಎಂದರೆ ಅಷ್ಟೆ ಸಾಕೆ

ಹಸಿರನುಟ್ಟ ಬೆಟ್ಟಗಳಲಿ ಮೊಲೆ ಹಾಲಿನ ಹೊಳೆಯ ಇಳಿಸಿ
ಬಯಲ ಹಸಿರ ನಗಿಸಿದಾಕೆ, ನಿನಗೆ ಬೇರೆ ಹೆಸರು ಬೇಕೆ ?
ಸ್ತ್ರೀ ಎಂದರೆ ಅಷ್ಟೆ ಸಾಕೆ

ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳು ಸವರಿ
ಹಕ್ಕಿ ಗಿಲಕಿ ಹಿಡಿಸಿದಾಕೆ, ನಿನಗೆ ಬೇರೆ ಹೆಸರು ಬೇಕೆ ?
ಸ್ತ್ರೀ ಎಂದರೆ ಅಷ್ಟೆ ಸಾಕೆ

ಮನೆ ಮನೆಯಲಿ ದೀಪ ಮುಡಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ
ತಂದೆ ಮಗುವ ತಬ್ಬಿದಾಕೆ, ನಿನಗೆ ಬೇರೆ ಹೆಸರು ಬೇಕೆ ?
ಸ್ತ್ರೀ ಎಂದರೆ ಅಷ್ಟೆ ಸಾಕೆ

Video link:
http://www.youtube.com/watch?v=VJ-WeqCMxkQ
English lyrics:
http://www.madhurabhavageethegalu.blogspot.com/2012/08/stree-endare-ashte-sake.html

2 comments:

 1. amazing lyrics! Thanks.
  in the last charaNa, should it not be
  "hottu hottige anna uNisi.."

  ReplyDelete
  Replies
  1. My bad, thanks for pointing it out!

   Delete

Note: Only a member of this blog may post a comment.