- ಜಿ. ಎಸ್. ಶಿವರುದ್ರಪ್ಪ
ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ, ನಿನಗೆ ಬೇರೆ ಹೆಸರು ಬೇಕೆ ?
ಸ್ತ್ರೀ ಎಂದರೆ ಅಷ್ಟೆ ಸಾಕೆ
ಹಸಿರನುಟ್ಟ ಬೆಟ್ಟಗಳಲಿ ಮೊಲೆ ಹಾಲಿನ ಹೊಳೆಯ ಇಳಿಸಿ
ಬಯಲ ಹಸಿರ ನಗಿಸಿದಾಕೆ, ನಿನಗೆ ಬೇರೆ ಹೆಸರು ಬೇಕೆ ?
ಸ್ತ್ರೀ ಎಂದರೆ ಅಷ್ಟೆ ಸಾಕೆ
ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳು ಸವರಿ
ಹಕ್ಕಿ ಗಿಲಕಿ ಹಿಡಿಸಿದಾಕೆ, ನಿನಗೆ ಬೇರೆ ಹೆಸರು ಬೇಕೆ ?
ಸ್ತ್ರೀ ಎಂದರೆ ಅಷ್ಟೆ ಸಾಕೆ
ಮನೆ ಮನೆಯಲಿ ದೀಪ ಮುಡಿಸಿ ಹೊತ್ತು ಹೊತ್ತಿಗೆ ಅನ್ನ ಉಣಿಸಿ
ತಂದೆ ಮಗುವ ತಬ್ಬಿದಾಕೆ, ನಿನಗೆ ಬೇರೆ ಹೆಸರು ಬೇಕೆ ?
ಸ್ತ್ರೀ ಎಂದರೆ ಅಷ್ಟೆ ಸಾಕೆ
Video link:
http://www.youtube.com/watch?v=VJ-WeqCMxkQ
English lyrics:
http://www.madhurabhavageethegalu.blogspot.com/2012/08/stree-endare-ashte-sake.html
amazing lyrics! Thanks.
ReplyDeletein the last charaNa, should it not be
"hottu hottige anna uNisi.."
My bad, thanks for pointing it out!
Delete