ನೀ ಹೀಂಗ ನೋಡಬ್ಯಾಡ ನನ್ನ...

- ದ . ರ. ಬೇಂದ್ರೆ
ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರೆ ನನ್ನ
ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ? ||

ಸಂಸಾರ ಸಾಗರದಾಗ ಲೆಕ್ಕವಿರದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು ಯಾಕ ನೋಡತೀ ಮತ್ತ ಮತ್ತ ನೀ ಇತ್ತ?

ದಾರೀಲೆ ನೆನೆದೆ ಕೈ ಹಿಡಿದೆ ನೀನು ತಣ್ಣಾಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ ಬೂದಿ ಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನ
ಆ ಗಾದಿ ಮಾತು ನಂಬಿ ನಾನು ದೇವರಂತ ತಿಳಿದಿಯೇನ ನೀ ನನ್ನ?

ಇಬ್ಬನಿ ತೊಳೆದರೂ ಹಾಲು ಮೆತ್ತಿದಾ ಕವಳಿ ಕಂಟಿಯ ಹಣ್ಣು    
ಹೊಳೆ ಹೊಳೆವ ಹಾಂಗ ಕಣ್ಣಿರುವ ಹೆಣ್ಣ ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲ
ಹುಣ್ಣಿವಿ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ

ನಿನ್ನ ಕಣ್ಣಿನ್ಯಾಗ ಕಾಲೂರಿ ಮಳೆಯು ನಡ ನಡಕ ಹುಚ್ಚ ನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂತ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರೆ ಅತ್ತುಬಿಡು ಹೊನಲು ಬರಲಿ ನಕ್ಯಾಕ ಮರಸತೀ ದುಃಖ?
ಎದೆ ಬಡಿಸಿ ಕೆಡವು ಬಿರಿಗಣ್ಣು ಬ್ಯಾಡ ತುಟಿಕಚ್ಚಿ ಹಿಡಿಯದಿರು ಬಿಕ್ಕ

Video link:
http://www.youtube.com/watch?v=p1sBx-c_t2U (Popular version)
http://www.youtube.com/watch?v=CD2HkR6eJkw (C. Aswath)

English lyrics:
http://www.madhurabhavageethegalu.blogspot.com/2013/04/nee-hinga-nodabyada-nanna.html

No comments:

Post a Comment

Note: Only a member of this blog may post a comment.