ನೇಗಿಲ ಯೋಗಿ...

- ಕುವೆಂಪು

ನೇಗಿಲ ಹಿಡಿದ ಹೊಲದೊಳು ಹಾಡುತ
ಉಳುವ ಯೋಗಿಯ ನೋಡಲ್ಲಿ ||
ಫಲವನು ಬಯಸದ ಸೇವೆಯೇ ಪೂಜೆಯು
ಕರ್ಮವೇ ಇಹಪರ ಸಾಧನವು
ಕಷ್ಟದೊಳನ್ನವ ದುಡಿವನೆ ತ್ಯಾಗಿ
ಸೃಷ್ಟಿನಿಯಮದೊಳಗವನೇ ಭೋಗಿ

ಲೋಕದೊಳೇನೆ ನಡೆಯುತಲಿರಲಿ
ತನ್ನೀ ಕಾರ್ಯವ ಬಿಡನೆಂದೂ
ರಾಜ್ಯಗಳುದಿಸಲಿ ರಾಜ್ಯಗಳಳಿಯಲಿ
ಹಾರಲಿ ಗದ್ದುಗೆ ಮುಕುಟಗಳು
ಮುತ್ತಿಗೆ ಹಾಕಲಿ ಸೈನಿಕರೆಲ್ಲ
ಬಿತ್ತುಳುವುದನವ ಬಿಡುವುದೇ ಇಲ್ಲ

ಯಾರೂ ಅರಿಯದ ನೇಗಿಲ ಯೋಗಿಯೇ
ಲೋಕಕೆ ಅನ್ನವನೀಯುವನು
ಹೆಸರನು ಬಯಸದೆ ಅತಿಸುಖಕೆಳಸದೆ
ದುಡಿವನು ಗೌರವಕಾಶಿಸದೆ
ನೇಗಿಲ ಕುಲದೊಳಗಡಗಿದೆ ಕರ್ಮ
ನೇಗಿಲ ಮೇಲೆಯೇ ನಿಂತಿದೆ ಧರ್ಮ

Video link:
http://www.youtube.com/watch?v=uJA6C-LL1Zk
English lyrics:
http://www.madhurabhavageethegalu.blogspot.com/2014/01/negila-yogi.html

 

No comments:

Post a Comment

Note: Only a member of this blog may post a comment.