ಬಾರೊ ಸಾಧನಕೇರಿಗೆ...

- ದ. ರ. ಬೇಂದ್ರೆ 
ಬಾ ಬಾರೋ, ಬಾರೋ ಬಾರೋ 
ಬಾರೊ ಸಾಧನಕೇರಿಗೆ ಮರಳಿ ನಿನ್ನೀ ಊರಿಗೆ ||

ಮಳೆಯು ಎಳೆಯುವ ತೇರಿಗೆ
ಹಸಿರು ಏರಿದೆ ಏರಿಗೆ      
ಹಸಿರು ಸೇರಿದೆ ಊರಿಗೆ
ಹಸಿರು ಚಾಚಿದೆ ದಾರಿಗೆ
ನಂದನದ ತುಣುಕೊಂದು ಬಿದ್ದಿದೆ
ನೋಟ ಸೇರದು ಯಾರಿಗೆ?

ಮಲೆಯ ಮೊಗವೇ ಹೊರಳಿದೆ
ಕೋಕಿಲಕೆ ಸವಿ ಕೊರಳಿದೆ
ಬೇಲಿಗೂ ಹೂ ಬೆರಳಿದೆ
ನೆಲಕೆ ಹರೆಯವು ಮರಳಿದೆ
ಭೂಮಿತಾಯ್ ಒಡಮುರಿದು ಎದ್ದಳೊ
ಶ್ರಾವಣದ ಸಿರಿ ಬರಲಿದೆ

ಮರವು ಮುಗಿಲಿಗೆ ನೀಡಿದೆ
ಗಿಡದ ಹೊದರೊಳು ಹಾಡಿದೆ
ಗಾಳಿ ಎಲ್ಲೂ ಆಡಿದೆ
ದುಗುಡ ಇಲ್ಲಿಂದೋಡಿದೆ
ಹೇಳು ಗೆಳೆಯಾ ಬೇರೆ ಎಲ್ಲಿ 
ಈ ತರದ ನೋಟವ ನೋಡಿದೆ?

Audio link:
http://www.kannadaaudio.com/Songs/Bhaavageethe/home/ShravanadaSiriBaralide.php
English lyrics:
http://www.madhurabhavageethegalu.blogspot.com/2014/07/baaro-sadhanakerige.html 

No comments:

Post a Comment

Note: Only a member of this blog may post a comment.