-ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ್
ಬನ್ನಿ ಭಾವಗಳೆ ಬನ್ನಿ ನನ್ನೆದೆಗೆಕರೆಯುವೆ ಕೈ ಬೀಸಿ
ಬತ್ತಿದೆದೆಯಲ್ಲಿ ಬೆಳೆಯಿರಿ ಹಸಿರನು
ಪ್ರೀತಿಯ ಮಳೆ ಸುರಿಸಿ ।।
ಬನ್ನಿ ಸಂಜೆ ಹೊಂಬಿಸಿಲಿನ ಹೊಳೆಯೊಳು
ಮೀಯುವ ಮುಗಿಲಿನಲಿ
ತವರಿನೆದೆಗೆ ತಂಪೆರೆಯುವ ಮೇಘದ
ಪ್ರೀತಿಯ ಧಾರೆಯಲಿ
ಲೋಕಕೆ ಹೊದಿಸಿದ ಕರಿತೆರೆ ಸರಿಸುವ
ಅರುನೋದಯದಲ್ಲಿ
ಪಕ್ಷಕ್ಕೊಮ್ಮೆ ಬಿಲಿಪತ್ತಲ ನೇಯುವ
ಹುಣ್ಣಿಮೆ ಹಸ್ತದಲಿ
ಬನ್ನಿ ಬನ್ನಿ ನನ್ನೆದೆಯ ಬಯಲಿದು
ಬಿಟ್ಟದ ಕೆನ್ನೆ ನೆಲ
ಬೆಳೆಯಿರಿ ಇಲ್ಲಿ ಬಗೆ ಬಗೆ ತೆನೆಯ
ನಮಿಸುವೆ ನೂರು ಸಲ
ನಿಮ್ಮನೆ ಕನವರಿಸಿ
ನಿಮಗೆ ಮನವರಿಸಿ
ಕಾಯುತ್ತಿರುವೆನು ಕ್ಷಣ ಕ್ಷಣವೂ
ಎದೆಯನು ಹದಗೊಳಿಸಿ
Audio link:
http://www.kannadaaudio.com/Songs/Bhaavageethe/home/Deepika.php
English lyrics:
http://www.madhurabhavageethegalu.blogspot.com/2015/01/banni-bhavagale.html
No comments:
Post a Comment
Note: Only a member of this blog may post a comment.